Headlines

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನದ ದಾಖಲೆ ನನ್ನ ಬಳಿಯಿದೆ: ಡಿಸಿಎಂ ಡಿ.ಕೆ.ಶಿ ಬಾಂಬ್

ರಾಹುಲ್ ಗಾಂಧಿ ಅವರು ಮಾಡಿರುವ ಆರೋಪ ನಿಜ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮತದಾನದಲ್ಲಿಯೂ ಗೋಲ್ಮಾಲ್ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬಾಂಬ್ ಸಿಡಿಸಿದ್ದಾರೆ. ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಮತಗಳ್ಳತನವಾಗಿದೆ ಎಂಬ ರಾಹುಲ್ ಗಾಂಧಿ ಅವರ ಹೇಳಿಕೆಗೆ ನವದೆಹಲಿಯಲ್ಲಿ ಇಂದು ಪ್ರತಿಕ್ರಿಯಿಸಿದ ಅವರು, ನಾನು ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಒಪ್ಪುತ್ತೇನೆ. ನಾನು ಕೂಡ ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತನಿಖೆ ನಡೆಸಿದ್ದೇನೆ. ಅಲ್ಲಿ ಅನೇಕ ಗೋಲ್ಮಾಲ್‌ಗಳು ನಡೆದಿವೆ. ಈ ಬಗ್ಗೆ ಸದ್ಯಕ್ಕೆ…

Read More

ಬೂದನೂರು ಗ್ರಾಮ ಪಂಚಾಯಿತಿಯ ಸಾಮಾಗ್ರಿ ಖರೀದಿಯಲ್ಲಿ ಭ್ರಷ್ಟಾಚಾರ; ಲೋಕಾಯುಕ್ತಕ್ಕೆ ದೂರು

ಮಂಡ್ಯ: ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ಎಸಗಿರುವ ಕುರಿತು ನಗರದಲ್ಲಿ ಲೋಕಾಯುಕ್ತಕ್ಕೆ ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಬಿ.ಕೆ.ಸತೀಶರವರು (ಬೂಸ) ದೂರು ನೀಡಿದರು‌‌. ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ರವರು ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿಯ ಅಧ್ಯಕ್ಷೆ ಮಾನಸ ಹಾಗೂ ಪಿಡಿಒ ವೈ.ಎಸ್‌.ವಿನಯ್ ಕುಮಾರ್ ಅವರು 2024-25ನೇ ಸಾಲಿನಲ್ಲಿ ಗ್ರಾಮ ಪಂಚಾಯತಿಯ ನೀರು ಸರಬರಾಜು ಸಾಮಾಗ್ರಿ ಖರೀದಿಯಲ್ಲಿ ಸರ್ಕಾರದ ಪಾರದರ್ಶಕ…

Read More

ಸರ್ಕಾರಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ: ಸಚಿವ ಕೆ.ಎನ್ ರಾಜಣ್ಣ, ಜೆಡಿಎಸ್ ತೀವ್ರ ಆಕ್ಷೇಪ

ಬೆಂಗಳೂರು, ಜುಲೈ 25: ಇತ್ತೀಚಿಗಷ್ಟೇ ಬೆಂಗಳೂರಿಗೆ ಬಂದು ಕಾಂಗ್ರೆಸ್ ಶಾಸಕರ ಮತ್ತು ಸಚಿವರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೆಲವು ಮಂದಿ ಸರ್ಕಾರಿ ಅಧಿಕಾರಿಗಳಿಗೂ ಕೂಡ ಬುಲಾವ್ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ. ಸುರ್ಜೇವಾಲ ಸರ್ಕಾರಿ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿದ್ದೇ ಆದರೆ ಅದು ಸಂವಿಧಾನ ಬಾಹಿರ ಕೃತ್ಯ ಎಂದು…

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ನ್ಯಾ.ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟಿಗೆ ಡಿಎನ್‌ಎ ರಿಟ್

ಬೆಂಗಳೂರು, ಜುಲೈ 25: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆ ಸಂಬಂಧ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸಬೇಕು ಎಂದು ತುರ್ತು ವಿಚಾರಣೆ ಕೋರಿ ಡಿಎನ್​ಎ ಎಂಟರ್​ಟೇನ್​ಮೆಂಟ್​​ ನೆಟ್​ವರ್ಕ್ ಕರ್ನಾಟಕ ಹೈಕೋರ್ಟ್​ಗೆ ಮನವಿ ಮಾಡಿದೆ. ನ್ಯಾ.ಜಯಂತ್ ಬ್ಯಾನರ್ಜಿ, ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಹೈಕೋರ್ಟ್ ಪೀಠಕ್ಕೆ ಈ ಮನವಿ ಸಲ್ಲಿಕೆಯಾಗಿದೆ. ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸದ್ಯ, ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ನಿಗದಿಪಡಿಸಿದೆ….

Read More

ಸಿಎಂ ಕುರ್ಚಿ ಸಮರ ದೆಹಲಿಗೆ ಶಿಫ್ಟ್!!!

ಪವರ್ ಶೇರಿಂಗ್ ಫೈಟ್‌.. ನಾಯಕತ್ವ ಗುದ್ದಾಟದ ಮಧ್ಯೆ ಇವತ್ತು ಸಿಎಂ, ಡಿಸಿಎಂ ಡೆಲ್ಲಿಯಾತ್ರೆ ಮಾಡ್ತಿದ್ದಾರೆ. ಇಂದು ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಡೆಲ್ಲಿ ಫ್ಲೈಟ್ ಹತ್ತಿದ್ದಾರೆ. ಕಳೆದ ಬಾರಿ ಡೆಲ್ಲಿಯಲ್ಲಿ ನಾನೇ 5 ವರ್ಷ ಮುಖ್ಯಮಂತ್ರಿ ಎಂದಿದ್ದ ಸಿದ್ದರಾಮಯ್ಯ ಮತ್ತೇನು ಬಾಂಬ್ ಸಿಡಿಸಲಿದ್ದಾರೆ? ಎಂಬ ಕೌತುಕ ಮೂಡಿದೆ. ಹೀಗೆ ಸಿಎಂ, ಡಿಸಿಎಂ ಪ್ರತ್ಯೇಕವಾಗಿ ದೆಹಲಿಯಾತ್ರೆ ಮಾಡ್ತಿರೋದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಹುಲ್ ಗಾಂಧಿ ಭೇಟಿಯಾಗ್ತಾರಾ ಸಿಎಂ-ಡಿಸಿಎಂ? ಇತ್ತೀಚಿಗಷ್ಟೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ…

Read More

ಹೈಕೋರ್ಟ್ ಮಹತ್ವದ ಆದೇಶ: ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಹಿನ್ನಡೆ

ಬೆಂಗಳೂರು, ಜುಲೈ 24: ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಭೂಸ್ವಾಧೀನಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆ (2025) ಅಡಿಯಲ್ಲಿ ಭೂಸ್ವಾಧೀನ ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ನೋಟಿಸ್ ಆಧರಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು. ಅರ್ಜಿದಾರರ ಬಿಡದಿ ಜಮೀನಿನ ಸ್ವಾಧೀನಕ್ಕೆ ಅಡ್ಡಿಪಡಿಸದಂತೆ ಆದೇಶ ಹೊರಡಿಸಿದೆ. ಅಲ್ಲದೇ ಈ ಬಗ್ಗೆ ಇದೇ ಜುಲೈ 29ರಂದು ಪ್ರತಿಕ್ರಿಯಿಸುವಂತೆ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿ ಹೈಕೋರ್ಟ್ ನೋಟಿಸ್…

Read More

ಮುಂಬೈ ಸರಣಿ ರೈಲು ಸ್ಫೋಟ: ಬಾಂಬೆ ಹೈಕೋರ್ಟ್ ನ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು. 189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ…

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಮೃತ ಯುವತಿಯ ಮರಣೋತ್ತರ ಪರೀಕ್ಷೆ ವೇಳೆ ಕಿವಿಯೋಲೆ ಕಳವು!

ಬೆಂಗಳೂರು, ಜುಲೈ 24: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ದಿವ್ಯಾಂಶಿಯ ಚಿನ್ನಾಭರಣ ಕಳ್ಳತನವಾಗಿರುವ ಆರೋಪ ಕೇಳಿಬಂದಿದೆ. ಶವಾಗಾರದೊಳಗೆ ಮೃತದೇಹ ಕೊಂಡೊಯ್ಯುವಾಗ ಮಗಳ ಕಿವಿಯೋಲೆ, ಚಿನ್ನದ ಸರ ಇತ್ತು. ಆದ್ರೆ, ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಆಭರಣ ಕಾಣೆಯಾಗಿತ್ತು ಎಂದು ದಿವ್ಯಾಂಶಿ ತಾಯಿ ಅಶ್ವಿನಿ ಆರೋಪಿಸಿ ಬೌರಿಂಗ್ ಆಸ್ಪತ್ರೆ ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಶವಾಗಾರದೊಳಗೆ ಮೃತದೇಹ ಕೊಂಡೊಯ್ಯುವಾಗ ಆಭರಣ ಇತ್ತು. ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಆಭರಣ…

Read More

ಕಲಾಸಿಪಾಳ್ಯದಲ್ಲಿ ಬಾಂಬ್ ಸ್ಫೋಟಕ‌ ಪತ್ತೆ ಹಿನ್ನೆಲೆ: ತನಿಖೆಗೆ 6 ತಂಡಗಳ ರಚನೆ

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ವಿಚಾರವಾಗಿ ತನಿಖೆಗೆ ಕಲಾಸಿಪಾಳ್ಯ ಠಾಣೆ ಪೊಲೀಸರಿಂದ ಆರು ತಂಡಗಳ ರಚನೆ ಮಾಡಲಾಗಿದೆ. ಸಿಸಿಬಿ, ಇಂಟೆಲಿಜೆನ್ಸ್, ಎಟಿಸಿ ತಂಡದಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಜಿಲೆಟಿನ್ ಕಡ್ಡಿ ಜೊತೆಗೆ ಡಿಟೋನೆಟರ್​​ಗಳು​ ಕೂಡ ಪತ್ತೆ ಆಗಿದ್ದವು. ಈ ಬಗ್ಗೆ ಕಲಾಸಿಪಾಳ್ಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಕಲಾಸಿಪಾಳ್ಯ ಬಸ್​ ನಿಲ್ದಾಣದ ಶೌಚಾಲಯದ ಸಮೀಪ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸ್ಫೋಟಕ ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ಶ್ವಾನದಳ, ಬಾಂಬ್​ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದ್ದವು….

Read More

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಜುಲೈ 24: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ತೂಗುದೀಪ್ ಹಾಗೂ ಇತರೆ ಎಲ್ಲಾ 17 ಆರೋಪಿಗಳು ಈಗಾಗಲೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಪೈಕಿ ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಮನವಿ ಮಾಡಿತ್ತು. ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ನಟ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು…

Read More
error: Content is protected !!