Headlines

ರಾಜಕಾರಣಿಗಳು 75 ವರ್ಷಕ್ಕೆ ನಿವೃತ್ತಿಯಾಗಬೇಕೆಂದ ಆರೆಸ್ಸೆಸ್ ಮುಖ್ಯಸ್ಥ!

ದೇಶದಲ್ಲಿ ಎಲ್ಲಾ ಪ್ರಮುಖ ಹುದ್ದೆಗಳಲ್ಲಿರುವ ರಾಜಕೀಯ ನಾಯಕರು 75 ವರ್ಷ ತುಂಬಿದ ನಂತರ ಸ್ವಯಂ ನಿವೃತ್ತಿಯಾಗಿ ಇತರರಿಗೆ ಅವಕಾಶ ನೀಡಬೇಕು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಮತ್ತೊಮ್ಮೆ ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು ಹೀಗೆ ಭಾಷಣ ಮಾಡಿದರು: “ಯಾರಾದರೂ ನಿಮಗೆ 75 ವರ್ಷ ತುಂಬಿದ್ದಕ್ಕೆ ಅಭಿನಂದನೆ ಸಲ್ಲಿಸಿದರೆ, ನೀವು ಕೆಲಸ ಮಾಡುವುದನ್ನು ನಿಲ್ಲಿಸಬೇಕು ಎಂದರ್ಥ. ಇತರರಿಗೆ ಕೆಲಸ ಮಾಡಲು ಅವಕಾಶ ನೀಡಬೇಕು” ಎಂದು ಒತ್ತಿ ಹೇಳಿದ್ದಾರೆ. ಮೋಹನ್…

Read More

ರಾಜಕೀಯ ಕುತೂಹಲ ಕೆರಳಿಸಿದ ಡಿಕೆಶಿ ದೆಹಲಿ ಪ್ರವಾಸ!

ಬೆಂಗಳೂರು, ಜುಲೈ 14: ರಾಜ್ಯ ಕಾಂಗ್ರೆಸ್ ಸರ್ಕಾರದಪವರ್ ಶೇರಿಂಗ್ ಫೈಟ್​ನಲ್ಲಿ ದಿನಕ್ಕೊಂದು ಟರ್ನ್. ಕ್ಷಣಕ್ಕೊಂದು ಟ್ವಿಸ್ಟ್ ಕಾಣಸಿಗ್ತಿದೆ. ಸಿಎಂ ಸಿದ್ದರಾಮಯ್ಯ ಇದೀಗ 5 ವರ್ಷದ ಜಪ ಮಾಡ್ತಿದ್ರೆ, ಡಿಸಿಎಂ-ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೌನಕ್ಕೆ ಜಾರಿದ್ರು. ಈ ಬೆನ್ನಲ್ಲೇ ಶಿರಡಿ ಸಾಯಿಬಾಬಾನ ದರ್ಶನಕ್ಕೆ ಮುಂದಾಗಿದ್ರು. ಈ ಹೊತ್ತಲ್ಲೇ ಮತ್ತೆ ಡಿಕೆಶಿ ದೆಹಲಿಗೆ ಹಾರಿದ್ದಾರೆ. ಪತ್ನಿ ಸಮೇತ ಶಿರಡಿ ಸಾಯಿಬಾಬಾ ದರ್ಶನ ಮಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಶ್ರದ್ಧೆ ನಂಬಿಕೆ ಮತ್ತು ತಾಳ್ಮೆ ಇದ್ದರೆ ಎಲ್ಲವೂ ಸಾಧ್ಯ ಅಂತ ಸಾಮಾಜಿಕ…

Read More

ಬಿಹಾರ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆದ್ದರೆ ಮಾತ್ರ ಸಿದ್ದರಾಮಯ್ಯ ಕುರ್ಚಿ ಭದ್ರ!

ನವದೆಹಲಿ, ಜುಲೈ 13: ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌‍ ಹೈಕಮಾಂಡ್‌ನ ಬಲಾ-ಬಲವನ್ನು ಪರೀಕ್ಷೆ ಒಳಪಡಿಸಲಿದ್ದು, ಸಹಜವಾಗಿಯೇ ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸುರ್ಜೇವಾಲ ನಡೆಸುತ್ತಿರುವ ಸರಣಿ ಸಭೆಗಳು ತೀವ್ರ ಕುತೂಹಲ ಕೆರಳಿಸಿವೆ. ಸಚಿವ ಸಂಪುಟ ಪುನರ್‌ ರಚನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಈವರೆಗೂ ಹೈಕಮಾಂಡ್‌ನ ಪ್ರಭಾವ ಎದ್ದುಕಾಣುತ್ತಿದೆ. ಒಂದು ವೇಳೆ ಬಿಹಾರದ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದಿದ್ದಾದರೆ ಸಿದ್ದರಾಮಯ್ಯ ಅವರು ಹೆಚ್ಚು…

Read More

ಹಮಾಸ್ ಜೊತೆ ಕದನ ವಿರಾಮ ಮಾತುಕತೆ ವಿಫಲ: ಗಾಜಾ ಮೇಲೆ ಇಸ್ರೇಲ್ ದಾಳಿ,110 ಸಾವು

ಹಮಾಸ್ ಭಯೋತ್ಪಾದಕರೊಂದಿಗಿನ ಗಾಜಾ ಕದನ ವಿರಾಮ ಮಾತುಕತೆ ವಿಫಲವಾದ ಕಾರಣ ಇಸ್ರೇಲ್ ಆಕ್ರೋಶಗೊಂಡಿದೆ. ಇಸ್ರೇಲ್ ಸೇನೆಯು ಗಾಜಾದ ಮೇಲೆ ವಿನಾಶಕಾರಿ ದಾಳಿಯನ್ನು ಪ್ರಾರಂಭಿಸಿದೆ. ಶನಿವಾರ ಗಾಜಾದಲ್ಲಿ ಇಸ್ರೇಲಿ ದಾಳಿಯಲ್ಲಿ ಕನಿಷ್ಠ 110 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ವೈದ್ಯಕೀಯ ಮೂಲಗಳ ವರದಿ ಮಾಹಿತಿ ನೀಡಿದೆ. ಅದರಲ್ಲಿ 34 ಜನರು ದಕ್ಷಿಣ ರಫಾದಲ್ಲಿ ಸಾವನ್ನಪ್ಪಿದ್ದಾರೆ. ಅವರೆಲ್ಲರೂ ಗಾಜಾ ಹ್ಯುಮನಿಟೇರಿಯನ್ ಫೌಂಡೇಷನ್ ಹೊರಗೆ ಆಹಾರ ಸಹಾಯಕ್ಕಾಗಿ ಕಾಯುತ್ತಿದ್ದರು. ಇಸ್ರೇಲ್ ಸೈನ್ಯವು ಯಾವುದೇ ಎಚ್ಚರಿಕೆ ನೀಡದೆ ಜನರ ಮೇಲೆ ಗುಂಡು ಹಾರಿಸಲು…

Read More

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿದ ಎಐಸಿಸಿ ಅಧ್ಯಕ್ಷ!

ನವದೆಹಲಿ, ಜುಲೈ 12: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ರಾಜಕೀಯದ ಚೆಸ್ ಗೇಮ್ ಭರ್ಜರಿಯಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲೇ ಕೂತು ‘ನಾನೇ 5 ವರ್ಷ ಸಿಎಂ’ ಎಂಬ ಸಂದೇಶವನ್ನು ರಾಜಾರೋಷವಾಗಿ ಸಾರಿದರು. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆಗೆ ಸಚಿವರು ಪಟ್ಟು ಹಿಡಿದಿದ್ದಾರೆ. ಇದನ್ನೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಮುಂದೆ ಹೇಳಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ನಿಯಮ ಇದ್ದು ಅದನ್ನು ಅನುಷ್ಠಾನಕ್ಕೆ ತನ್ನಿ ಎಂದು ಸಚಿವರು ಆಗ್ರಹಿಸಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ….

Read More

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಮರಣಮೃದಂಗ: ನ್ಯಾಯಾಂಗ ತನಿಖಾ ವರದಿಯಲ್ಲಿ ಸತ್ಯ ಬಯಲು!

ಬೆಂಗಳೂರು, ಜುಲೈ 12: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ 2025ನೇ ವರ್ಷದ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವೇಳೆ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ‌ ದುರಂತದ ತನಿಖಾ ವರದಿ ಬಹಿರಂಗವಾಗಿದೆ. ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ತನಿಖಾ ವರದಿಯಲ್ಲಿ ಸ್ಫೋಟಕ ಅಂಶಗಳು ಬಯಲಾಗಿವೆ. ಕಾಲ್ತುಳಿತ ದುರಂತಕ್ಕೆ ಆರ್​​ಸಿಬಿ, ಡಿಎನ್​ಎ ಮತ್ತು ಕೆಎಸ್​ಸಿಎ ಕಾರಣ ಎಂದು…

Read More

ಬೇಕರಿ, ಕಾಂಡಿಮೆಂಟ್ಸ್, ಬೀಡಾ ಅಂಗಡಿ ಮಾಲೀಕರಿಗೆ ಗುಡ್ ನ್ಯೂಸ್!

ಬೆಂಗಳೂರು, ಜುಲೈ 12: ಯುಪಿಐ (UPI) ಮೂಲಕ 40 ಲಕ್ಷ ರೂಪಾಯಿಗಿಂತ ಅಧಿಕ ವಹಿವಾಟು ನಡೆಸಿದ ಬೇಕರಿ, ಕಾಂಡಿಮೆಂಟ್ಸ್, ಬೀಡ ಅಂಗಡಿಗಳು ಕಮರ್ಷಿಯಲ್ ಟ್ಯಾಕ್ಸ್ ಪಾವತಿ ಮಾಡಬೇಕೆಂಬ ನೋಟಿಸ್​ಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ವಾರ್ಷಿಕ ವಹಿವಾಟು 1.5 ಕೋಟಿ ರೂ.ಗಿಂತ ಕಡಿಮೆ ಇದ್ದರೆ ಅಂತಹ ವರ್ತಕರು ಕೇವಲ ಶೇ.1 ರಷ್ಟು ಮಾತ್ರ ತೆರಿಗೆ ಪಾವತಿಸಬಹುದಾಗಿದೆ ಎಂದು ಹೇಳಿದೆ. ಆದರೆ, ಯುಪಿಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು…

Read More

ಸಚಿವರ ಮೌಲ್ಯಮಾಪನಕ್ಕೆ ಮುಂದಾದ ಎಐಸಿಸಿ: ಮುಂದುವರಿದ ಕೈ ಕಗ್ಗಂಟು

ಬೆಂಗಳೂರು, ಜುಲೈ 12: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಇದೇ ಜುಲೈ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ. ಆದರೆ ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್‌‍ ಪಕ್ಷದಲ್ಲೇ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್‌‍ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ….

Read More

ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿ.ಕೆ.ಶಿ ಅವರಿಗಿಲ್ಲ: ಸಿಎಂಗೆ ಡಿ.ಕೆ‌ ಸುರೇಶ್ ಟಾಂಗ್!

ಬೆಂಗಳೂರು, ಜುಲೈ 12: ರಾಜಕಾರಣದಲ್ಲಿ ನಿವೃತ್ತಿ ಅಂತಿಲ್ಲ, ಹಾಗಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2028ರಲ್ಲೂ ತನ್ನದೇ ನಾಯಕತ್ವ ಅಂತ ಹೇಳಿರಬಹುದು ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಶಾಸಕಾಂಗದ ಬೆಂಬಲದೊಂದಿಗೆ ಸಿದ್ದರಾಮಯ್ಯನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ, 2 ವರ್ಷದಿಂದ ಅಧಿಕಾರ ನಡೆಸಿಕೊಂಡು ಹೋಗುತ್ತಿದ್ದಾರೆ, ಮುಂದೆಯೂ ನಡೆಸುತ್ತಾರೆ, ಡಿ.ಕೆ ಶಿವಕುಮಾರ್ ಅವರು ಶಾಸಕರ ಬೆಂಬಲ ಪಡೆದುಕೊಳ್ಳಲು ಅಥವಾ ಕೇಳಲು ಇದು ಸಮಯ ಅಲ್ಲ, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆ ಯಾಕೆ…

Read More

ಸಿದ್ದರಾಮಯ್ಯರನ್ನು ಕೆಳಗಿಳಿಸಿ ಸಿಎಂ ಸ್ಥಾನದಲ್ಲಿ ಖರ್ಗೆ ಕೂರಿಸಲು ನಡೆದಿದೆ ರಣತಂತ್ರ!

ಬೆಂಗಳೂರು, ಜುಲೈ 12: ಸೆಪ್ಟೆಂಬರ್‌ ಕ್ರಾಂತಿಯ ಚರ್ಚೆಯಲ್ಲಿ ಹಾರಾಟ ನಡೆಸಿದವರೆಲ್ಲಾ ತಣ್ಣಗಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಜ್ಯ ರಾಜಕಾರಣಕ್ಕೆ ಕರೆತಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಲು ಒಂದು ಬಣ ಅದ್ದಿ ಲ್ಲಿದೆ ಕಾರ್ಯಾಚರಣೆ ನಡೆಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿ ಸ್ಥಾನದಲ್ಲಿದ್ದು, ಅವರನ್ನು ಕರೆತರುವ ಮೂಲಕ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಅಹಿಂದ ಮೂಲಮಂತ್ರಕ್ಕೆ ಪೆಟ್ಟು ನೀಡುವ ಕಾರ್ಯತಂತ್ರಗಳು ನಡೆಯುತ್ತಿವೆ. ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಆಯ್ಕೆಯ ವಿಚಾರವಾಗಿ…

Read More
error: Content is protected !!