ಸಚಿವರ ಮೌಲ್ಯಮಾಪನಕ್ಕೆ ಮುಂದಾದ ಎಐಸಿಸಿ: ಮುಂದುವರಿದ ಕೈ ಕಗ್ಗಂಟು
ಬೆಂಗಳೂರು, ಜುಲೈ 12: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ಜುಲೈ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ. ಆದರೆ ಸುರ್ಜೇವಾಲ ಅವರ ಕಾರ್ಯವೈಖರಿಗೆ ಕಾಂಗ್ರೆಸ್ ಪಕ್ಷದಲ್ಲೇ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ ಸಿದ್ದರಾಮಯ್ಯ ಪ್ರಭಾವಿ ನಾಯಕರಾಗಿದ್ದು, ಅವರನ್ನೂ ದೂರ ಇಟ್ಟು ಸುರ್ಜೇವಾಲ ನೇರವಾಗಿ ಕಾಂಗ್ರೆಸ್ ಶಾಸಕರ ಜೊತೆ ಅಭಿಪ್ರಾಯ ಸಂಗ್ರಹಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ….

