ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ನ್ಯಾ.ಮೈಕೆಲ್ ಕುನ್ಹಾ ವರದಿ ರದ್ದು ಕೋರಿ ಹೈಕೋರ್ಟಿಗೆ ಡಿಎನ್‌ಎ ರಿಟ್
ಬೆಂಗಳೂರು, ಜುಲೈ 25: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆ ಸಂಬಂಧ ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ರದ್ದುಗೊಳಿಸಬೇಕು ಎಂದು ತುರ್ತು ವಿಚಾರಣೆ ಕೋರಿ ಡಿಎನ್‌ಎ ಎಂಟರ್ಟೇನ್ಮೆಂಟ್ ನೆಟ್ವರ್ಕ್ ಕರ್ನಾಟಕ ಹೈಕೋರ್ಟ್ಗೆ ಮನವಿ ಮಾಡಿದೆ. ನ್ಯಾ.ಜಯಂತ್ ಬ್ಯಾನರ್ಜಿ, ನ್ಯಾ.ಎಸ್.ಜಿ.ಪಂಡಿತ್ ಅವರಿದ್ದ ಹೈಕೋರ್ಟ್ ಪೀಠಕ್ಕೆ ಈ ಮನವಿ ಸಲ್ಲಿಕೆಯಾಗಿದೆ. ನ್ಯಾ.ಮೈಕೆಲ್ ಕುನ್ಹಾ ವರದಿಯನ್ನು ಕರ್ನಾಟಕ ಸಚಿವ ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಸದ್ಯ, ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 28ಕ್ಕೆ ನಿಗದಿಪಡಿಸಿದೆ….

