ಸಂಸದ ತೇಜಸ್ವಿಸೂರ್ಯ ವಿರುದ್ಧದ ಸುಳ್ಳು ಸುದ್ದಿ ಪ್ರಕರಣ ವಜಾ: ರಾಜ್ಯಸರ್ಕಾರಕ್ಕೆ ಮುಖಭಂಗ
ನವದೆಹಲಿ, ಜುಲೈ 21: ಹಾವೇರಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆಯೂ ಸುಳ್ಳು ಸುದ್ದಿ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಜೊತೆಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಮುಖಭಂಗ ಉಂಟಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ ವಿಚಾರಣೆ…

