ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್!
ನವದೆಹಲಿ, ಜುಲೈ 21: ಮುಡಾ ಹಗರಣ ಸಂಬಂಧ ಕೇಂದ್ರ ಜಾರಿ ನಿರ್ದೇಶನಾಲಯ ತನಿಖೆ ವಿಚಾರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಸುಪ್ರೀಂಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ಕೇಂದ್ರ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಇ.ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಷ್ಟೇ ಅಲ್ಲದೆ, ಇಡಿಯನ್ನು ರಾಜಕೀಯವಾಗಿ ಬಳಸಿಕೊಳ್ಳುವ…
