ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣ ಮೃಗಗಳು ಶಂಕಾಸ್ಪದ ಸಾವು: ತನಿಖೆಗೆ ಅರಣ್ಯ ಸಚಿವರ ಆದೇಶ
ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಶನಿವಾರ ಬೆಳಗ್ಗೆ ಮತ್ತೆ 20 ಕೃಷ್ಣಮೃಗಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳುಮಾಹಿತಿ ನೀಡಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃಗಾಲಯದಲ್ಲಿರುವ ಕೃಷ್ಣಮೃಗಗಳುಈ ಸಂಬಂಧ ಡಿ.ಎಫ್.ಒ. ಎನ್.ಇ.ಕ್ರಾಂತಿ ಅವರನ್ನು ಈಟಿವಿ ಭಾರತ ಪ್ರತಿನಿಧಿ ಸಂಪರ್ಕಿಸಿದಾಗ, ”ಬ್ಯಾಕ್ಟಿರಿಯಲ್ ಇನ್ಫೆಕ್ಷನ್ನಿಂದ…

