ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛ ಸಂವಾದ ಸಭೆ
ಸಕಲೇಶಪುರ: ಸಕಲೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಸಾರ್ವಜನಿಕ ಅಭಿವೃದ್ಧಿಯ ಉದ್ದೇಶದಿಂದ ಸ್ವಚ್ಛ ಸಂವಾದ ಸಭೆ ಗುರುವಾರ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಿ ಕೇಂದ್ರ ರೈಲ್ವೆ ಇಲಾಖೆಗೆ ಕಳುಹಿಸಲಾಗುವುದು ಎಂದು ಹಿರಿಯ ವಿಭಾಗ ವೈದ್ಯಾಧಿಕಾರಿ ಡಾ. ಅಕ್ಷತಾ ಆರ್ ಅವರು ತಿಳಿಸಿದರು. ಪುರಸಭೆ ಸದಸ್ಯ ಪ್ರಜ್ವಲ್ ಗೌಡ ಅವರು ಮಾತನಾಡಿ, ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛ ಕುಡಿಯುವ ನೀರಿನ ಸೌಲಭ್ಯವನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದರು. ಜೊತೆಗೆ, ಗುಡ್ಡ ಕುಸಿತದಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು…

