ಮಂಡ್ಯದ ಬೆನ್ನಲ್ಲೇ ಚಾಮರಾಜನಗರದಲ್ಲೂ ಫ್ಲೆಕ್ಸ್ ವಿವಾದ: ಅಧಿಕಾರಿಗಳ ಪ್ರಚಾರಕ್ಕೆ ಖಾಸಗಿ ಸಂಘಟನೆಗಳ ಸಾಥ್?
ವರದಿ: ರಾಮಸಮುದ್ರ ಎಸ್. ವೀರಭದ್ರಸ್ವಾಮಿ ಮಂಡ್ಯ ಜಿಲ್ಲೆಯಲ್ಲಿ ಹಬ್ಬದ ಶುಭಕೋರುವ ಫ್ಲೆಕ್ಸ್‌ಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಫೋಟೋ ಬಳಕೆಯಾಗಿ ದೊಡ್ಡಮಟ್ಟದ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಈಗ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಅಂತಹದ್ದೇ ಬೆಳವಣಿಗೆಯೊಂದು ಮುನ್ನೆಲೆಗೆ ಬಂದಿದೆ. ಖಾಸಗಿ ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳ ಭಾವಚಿತ್ರಗಳನ್ನು ಫ್ಲೆಕ್ಸ್‌ಗಳಲ್ಲಿ ಬಳಸಿರುವುದು ಈಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಚಾಮರಾಜನಗರ ವಿಶ್ವವಿದ್ಯಾನಿಲಯ ಹಾಗೂ ಮೈಸೂರಿನ ಶ್ರೀ ಯೋಗಿನಾರಾಯಣ ಯತೀಂದ್ರರ ಪ್ರಚಾರ ಸಭಾ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಕೈವಾರ ತಾತಯ್ಯನವರ…

