ಡಿಸೆಂಬರ್ ವೇಳೆಗೆ ರಾಜ್ಯದ 41,849 ಕೆರೆಗಳ ಒತ್ತುವರಿ ತೆರವು: ಸಚಿವ ಭೋಸರಾಜು
ಬೆಂಗಳೂರು, ಅಕ್ಟೋಬರ್ 10: ಮುಂಬರುವ ಡಿಸೆಂಬರ್ ವೇಳೆಗೆ 41,849 ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸುವ ಕೆಲಸ ಮಾಡುವ ಮೂಲಕ ಅಂತರ್ಜಲ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ “ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್: ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ…

