Headlines

12ನೇ ಬಾರಿ ಭಾರತದ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್ 15: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ನಿಮಿತ್ತ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ದೇಶವನ್ನು ಉದ್ದೇಶಿಸಿ ಪ್ರಧಾನಿಗಳು ಭಾಷಣ ಮಾಡಲಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಬೆಳಗ್ಗೆ ರಾಜ್​ಘಾಟ್​​ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಮಹಾತ್ಮ ಗಾಂಧಿ ಸಮಾಧಿಗೆ ನಮನ ಸಲ್ಲಿಕೆ ಮಾಡಿದರು. ಇದಾದ ಮೇಲೆ ಕೆಂಪು ಕೋಟೆ ಕಡೆಗೆ ಆಗಮಿಸಿದರು. ಈ ವೇಳೆ ರಕ್ಷಣಾ ಸಚಿವರು ಪ್ರಧಾನಿಗಳನ್ನು ಸ್ವಾಗತ ಮಾಡಿದರು. ಎಲ್ಲರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ಮೋದಿ ಅವರು ಒಟ್ಟು 12 ಬಾರಿ ಧ್ವಜಾರೋಹಣ ನೆರವೇರಿಸಿದ್ದಾರೆ.

ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನ ಸ್ಥಳದಿಂದಲೇ 5 ಸಾವಿರ ಜನರು ಕಣ್ತುಂಬಿಕೊಂಡರು. ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಕೆಂಪು ಕೋಟೆ ಭದ್ರೆತೆ 20 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಸಿಸಿಟಿವಿಗಳು ಹದ್ದಿನ ಕಣ್ಣು ಇಟ್ಟಿದ್ದವು. ಅಲ್ಲದೇ ಯಾವುದೇ ಡ್ರೋನ್ ಹಾರಿಸಲು ಅವಕಾಶ ನೀಡಿಲ್ಲ.

Leave a Reply

Your email address will not be published. Required fields are marked *

error: Content is protected !!