Headlines

2028ಕ್ಕೂ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು

ಬೆಂಗಳೂರು, ಜುಲೈ 11: ಮುಂದಿನ 2028 ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಅಭ್ಯರ್ಥಿಯೆಂದು ನಾನು ಹೇಳುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾನು 5 ವರ್ಷದ ಸಿಎಂ ಆಗಿ ಇರುತ್ತೇನೆ. ಜೊತೆಗೆ ಮುಂದೆ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾನೇ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಹೇಳಿದ್ದರು‌.

ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಇಂದು ಸಚಿವ ಸತೀಶ್ ಜಾರಕಿಹೊಳಿ ಅವರು ಬೆಂಬಲಿಸದೇ ಹೀಗೆ ಹೇಳಿದ್ದಾರೆ:
“ನಮ್ಮ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಿಎಂ ಆಗಿ ಸಿದ್ದರಾಮಯ್ಯ ಅವರೇ 5 ವರ್ಷ ಅಧಿಕಾರ ನಡೆಸಬಹುದು, ಆದರೆ 2028 ರ ವಿಧಾನಸಭೆ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರೇ ಪಕ್ಷದ ಸಿಎಂ ಅಭ್ಯರ್ಥಿ ಎಂದು ನಾನು ಹೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ. ಈ ಮೂಲಕ ತಾವೇ ಕೆಪಿಸಿಸಿ ಅಧ್ಯಕ್ಷರಾಗಲು ಸತೀಶ್ ಜಾರಕಿಹೊಳಿ ಅವರು ಮುಂದಾಗಿದ್ದಾರೆ. ಇದರಿಂದ ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಮುಂದೇನು? ಎಂಬ ಆತಂಕ ಸೃಷ್ಟಿಯಾಗಿದೆ.

Leave a Reply

Your email address will not be published. Required fields are marked *

error: Content is protected !!