Headlines

ಶ್ರೀರಂಗಪಟ್ಟಣ ದಸರಾ ಲೋಗೋ ಬಿಡುಗಡೆ

ಮಂಡ್ಯ.ಸೆ.12:- ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರೆಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಲೋಗೋ ವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬಿಡುಗಡೆಗೊಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಗೋ ಬಿಡುಗಡೆಯ ನಂತರ ಮಾತನಾಡಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ನಟ ಟಿ.ಎಸ್ ನಾಗಾಭರಣ ಅವರು ನೆರವೇರಿಸಲಿದ್ದಾರೆ ಎಂದರು.

 ಈ ಬಾರಿಯ ಕಾರ್ಯಕ್ರಮಗಳನ್ನು ಸಹ ಉತ್ತಮವಾಗಿ ಸಂಘಟಿಸಲಾಗುವುದು. ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೆ. 25 ರಂದು ಉದ್ಘಾಟನೆ ಹಾಗೂ 28 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಇದೇ ಸಂದರ್ಭದಲ್ಲಿ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!